ಧಾರವಾಡ: ರಾಜ್ಯಾದ್ಯಂತ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತ. ಉತ್ತರ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮಾತ್ರ ಇರಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಎಚ್.ಪಾಟೀಲ ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ಮೂರು ದಿನ ಮಳೆ ಇರಲ್ಲ: ಡಾ. ಆರ್.ಹೆಚ್. ಪಾಟೀಲ
ನವೆಂಬರ್ 5, 6, 7 ಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವುದಿಲ್ಲ, ಕೇವಲ ಮೋಡ ಮುಸುಕಿದ ವಾತಾವರಣ ಅಷ್ಟೇ ಇರಲಿದೆ ಎಂದು ಧಾರವಾಡ ಕೃಷಿ ವಿವಿ ಹವಾಮಾನ ವಿಭಾಗದ ಮುಖ್ಯಸ್ಥ ಡಾ.ಆರ್.ಎಚ್. ಪಾಟೀಲ ಮಾಹಿತಿ ನೀಡಿದ್ದಾರೆ.
ಡಾ.ಆರ್.ಹೆಚ್.ಪಾಟೀಲ
ಈ ಕುರಿತು ಇಂದು ಮಾತನಾಡಿರುವ ಅವರು, ಉತ್ತರ ಕರ್ನಾಟಕದಲ್ಲಿ ನವೆಂಬರ್ 5, 6, 7 ಕ್ಕೆ ಮಳೆಯಾಗುವ ಮುನ್ಸೂಚನೆ ಇತ್ತು. ಆದರೆ ಆ ಮಳೆ ರಾಜ್ಯದ ದಕ್ಷಿಣ ಭಾಗಕ್ಕೆ ಮಾತ್ರ ಸೀಮಿತವಾಗಿದೆ. ಸದ್ಯಕ್ಕೆ ಉತ್ತರ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಮಾಹಿತಿ ನೀಡಿದರು.
ಅರಬ್ಬೀ ಸಮುದ್ರದಲ್ಲಿ ಮತ್ತೊಂದು ವಾಯುಭಾರ ಕುಸಿತ ಆಗುತ್ತಿದೆ. ಆದ್ದರಿಂದ ನ. 11ರ ಬಳಿಕ ಉತ್ತರ ಭಾಗದಲ್ಲಿ ಮಳೆಯಾಗಲಿದೆ ಎಂದು ಹೇಳಿದರು.