ಕರ್ನಾಟಕ

karnataka

ETV Bharat / city

ಹುಬ್ಬಳ್ಳಿಯಲ್ಲಿ ಮಾಸ್ಕ್ ಧರಿಸದೇ ಓಡಾಟ: ಒಂದೇ ದಿನ 18,000 ರೂ. ದಂಡ ವಸೂಲಿ - ಹುಬ್ಬಳ್ಳಿ ಸುದ್ದಿ

ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾಸ್ಕ್​ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಂತಿಲ್ಲ. ಒಂದೇ ಈ ನಿಯಮ ಉಲ್ಲಂಘಿಸಿದರೇ ದಂಡ ಹಾಕಲಾಗುವುದು ಎಂದು ಹೇಳಿತ್ತು.

wearing mask
ಮಾಸ್ಕ್

By

Published : Jul 2, 2020, 6:23 AM IST

ಹುಬ್ಬಳ್ಳಿ:ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿದ್ದವರಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿ ದಂಡ ವಿಧಿಸಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾಸ್ಕ್​ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಂತಿಲ್ಲ. ಈ ನಿಯಮ ಉಲ್ಲಂಘಿಸಿದರೇ ದಂಡ ಹಾಕಲಾಗುವುದು ಎಂದು ಹೇಳಿತ್ತು.

ಅಂತೆಯೇ ನಗರದಲ್ಲಿ ಪಾಲಿಕೆ ಅಧಿಕಾರಿಗಳು ಮಾಸ್ಕ್ ಇಲ್ಲದೇ ಓಡಾಡುತ್ತಿದ್ದ ಸಾರ್ವಜನಿಕರಿಗೆ ದಂಡ ವಿಧಿಸಿದ್ದಾರೆ. ಕೊರೊನಾ ಆರ್ಭಟದ ನಡುವೆಯೂ ನಗರದಲ್ಲಿ ಕೆಲವು ಸಾರ್ವಜನಿಕರು ಮುಖಗವಸು ಧರಸಿದೇ ಓಡಾಡುತ್ತಿದ್ದರು.

ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರ ಕಲಂ 431ರ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಒಂದೇ ದಿನ ಒಟ್ಟು 18,000 ರೂ. ದಂಡ ವಿಧಿಸಲಾಗಿದೆ. ಇದುವರೆಗೆ ಒಟ್ಟು 2,85,000 ರೂ. ದಂಡ ವಸೂಲಿ ಮಾಡಲಾಗಿದೆ.

ABOUT THE AUTHOR

...view details