ಹುಬ್ಬಳ್ಳಿ:ಮಾಗೋಡು ಜಲಪಾತ ಪ್ರವಾಸಕ್ಕೆ ಹೋಗುವ ನೆಪದಲ್ಲಿ ಕಾರು ಬಾಡಿಗೆ ಪಡೆದು, ಚಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರ್ಸ್, ಮೊಬೈಲ್, ವಾಹನ ದೋಚಿಕೊಂಡು ಹೋಗಿದ್ದ ಮೂವರಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 20,000 ರೂ. ದಂಡ ವಿಧಿಸಿದೆ.
ಪ್ರವಾಸದ ನೆಪದಲ್ಲಿ ಅಹ್ಮದ ಪಣಿಬಂದ, ಅವಿನಾಶ ಪವಾರ, ಮಂಜುನಾಥ ಪವಾರ ಶಿಕ್ಷೆಗೊಳಗಾದವರು. ಗಿರಣಿಚಾಳ ನಿವಾಸಿ ಗಣೇಶ ಜುಮ್ಹಾಪುರ ಎಂಬಾತ 2014ರ ಜುಲೈ 5ರಂದು ಚೆನ್ನಮ್ಮ ವೃತ್ತದ ಬಳಿ ಈದ್ಗಾ ಮೈದಾನದಲ್ಲಿ ಬಾಡಿಗೆಗಾಗಿ ಕಾರು ನಿಲ್ಲಿಸಿದ್ದರು. ಈ ವೇಳೆ ಓರ್ವ ಯುವತಿಯೊಂದಿಗೆ ಬಂದ ಸಿರಾಜ್ ಪಣಿಬಂದ ಎಂಬಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತಕ್ಕೆ ತೆರಳಲು ಬಾಡಿಗೆ ಮಾತನಾಡಿದ್ದ. ಬಳಿಕ ಇಬ್ಬರೂ ಕಾರಿನಲ್ಲಿ ಹೊರಟಿದ್ದರು. ಮಾರ್ಗ ಮಧ್ಯ ಹಳೇ ಹುಬ್ಬಳ್ಳಿ ಶಿಮ್ಲಾ ನಗರದ ಬಳಿ ಸಿರಾಜ್ ತನ್ನ ಸಹಚರರಾದ ಅವಿನಾಶ ಪವಾರ, ಮಂಜುನಾಥ ಪವಾರ ಹಾಗೂ ಓರ್ವ ಬಾಲಾಪರಾಧಿಯನ್ನು ಹತ್ತಿಸಿಕೊಂಡಿದ್ದ.