ಧಾರವಾಡ : ಕರ್ನಾಟಕದ ಹೈಕೋರ್ಟ್ ಪೀಠ ಐತಿಹಾಸಿಕ ತೀರ್ಪು ಕೊಟ್ಟಿದೆ. 2016 ರಲ್ಲಿ ಆಗಿನ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸರ್ಕಾರ ಮಾಡಬಾರದ ಮಹಾಪರಾಧ ಮಾಡಿದ್ದರು. ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಲೋಕಾಯುಕ್ತದ ಅಧಿಕಾರ ತೆಗೆದಿದ್ದರು. ರಾಜ್ಯದ ಜನತೆಗೆ ವಿಶ್ವಾಸಘಾತ ಮಾಡಿ ಎಸಿಬಿ ರಚಿಸಿದ್ದರು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ ವಾಗ್ದಾಳಿ ನಡೆಸಿದರು.
ತಮ್ಮ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದ್ದರು. ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಸಿದ್ದರಾಮಯ್ಯ ಸಿಎಂ ಆದಾಗ ಅವರನ್ನು ಭೇಟಿಯಾಗಿದ್ದೆವು. ಗಣಿಗಾರಿಕೆಯಲ್ಲಿ ಒಂದು ಲಕ್ಷ ಕೋಟಿ ಲೂಟಿ ಮಾಡಿದ್ದನ್ನು ಅವರಿಗೆ ತಿಳಿಸಿದ್ದೆವು. ಆಗ ಎಚ್ ಕೆ ಪಾಟೀಲ ನೇತೃತ್ವದಲ್ಲಿ ಸಮಿತಿ ಮಾಡಿದ್ದರು. ಆದರೂ ಏನೂ ಪ್ರಯೋಜನ ಆಗಲಿಲ್ಲ. ಲೋಕಾಯುಕ್ತರು ಮಾಜಿ ಸಿಎಂ ಯಡಿಯೂರಪ್ಪ ಸೇರಿ ಅನೇಕರನ್ನು ಜೈಲಿಗೆ ಕಳುಹಿಸಿದ್ದರು. ಅಕ್ರಮ ಗಣಿಗಾರಿಕೆಯಲ್ಲಿ ನಾಲ್ಕು ಜನ ಕುರ್ಚಿ ಬಿಟ್ಟು ಇಳಿಬೇಕಾಗಿತ್ತು ಎಂದರು.