ಹುಬ್ಬಳ್ಳಿ:ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಮತ್ತೆ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಇಂದು ನ್ಯಾಯಾಲಯ ಆದೇಶಿಸಿದೆ. ಆರೋಪಿಗಳಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ಅವರನ್ನು ಈ ಹಿಂದೆ ಆರು ದಿನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ ಇಂದು ಅವಧಿ ಮುಕ್ತಾಯವಾದ್ದರಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗುರೂಜಿ ಹತ್ಯೆಯ ಆರೋಪಿಗಳನ್ನು ಜುಲೈ 18 ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಹೆಚ್ಚಿನ ವಿಚಾರಣೆಗಾಗಿ 15 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು. ಆದರೆ, ಕೇವಲ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನಾಯಾಧೀಶ ನಾಗೇಶ ನಾಯ್ಕ್ ಅವರು ಆದೇಶ ನೀಡಿದ್ದಾರೆ.