ಹುಬ್ಬಳ್ಳಿ:ನವಲಗುಂದ ನಗರದ ಕನ್ನಡ ಶಾಲೆ ನಂ-4 ರಲ್ಲಿ ಮತ್ತು ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಶಾಲೆಯನ್ನು 5 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.
ನವಲಗುಂದ ನಗರದ ಕನ್ನಡ ಶಾಲೆ ನಂ-4 ರಲ್ಲಿ ಒಟ್ಟು 13 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ರೋಟರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಲ್ಲಿ 22 ವಿದ್ಯಾರ್ಥಿಗಳಿಗೆ ಮತ್ತು 3 ಶಿಕ್ಷಕರಿಗೆ ಸೋಂಕು ದೃಢ ಪಟ್ಟಿದ್ದು, ಎರಡು ಶಾಲೆಗಳನ್ನು 5 ದಿನಗಳ ಕಾಲ ಸೀಲ್ಡೌನ್ ಮಾಡಲಾಗಿದೆ.