ಹುಬ್ಬಳ್ಳಿ: ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದೇವೆ. ಸಿಎಂ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಡಿಪಿಐ ನಿಷೇಧಿಸಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ನಾವು ಪಾಠ ಕಲಿಯಬೇಕಿಲ್ಲ. ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಪಷ್ಟ ನಿಲುವು ಏನು ಎಂಬುದನ್ನು ತಿಳಿಸಲಿ.
ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಹಿಜಾಬ್ ವಿಷಯದಲ್ಲಿ ಒಡಕಿದೆ. ಅದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಇವರನ್ನು ದೆಹಲಿಗೆ ಕರೆಸಿಕೊಂಡು ಪಾಠ ಹೇಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕುಟುಕಿದರು.