ಹುಬ್ಬಳ್ಳಿ: ರೈತರ ಹೋರಾಟಕ್ಕೆ ಸಾಥ್ ನೀಡಿದ್ದ ಧಾರವಾಡ ಹೈಕೋರ್ಟ್ನ ಹಿರಿಯ ವಕೀಲ ಬಿ.ಡಿ. ಹಿರೇಮಠ ಅವರು ಅಸ್ವಸ್ಥಗೊಂಡಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಏತ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನ ಮಾಡಿಕೊಂಡಿರುವುದನ್ನು ವಿರೋಧಿಸಿ ಹಾವೇರಿಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ಈ ಹೋರಾಟದಲ್ಲಿ ಬಿ.ಡಿ.ಹಿರೇಮಠ ಸಹ ಭಾಗವಹಿಸಿ, ರೈತರ ಬೆಂಬಲಕ್ಕೆ ನಿಂತಿದ್ದು, ಕಳೆದ 14 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.