ಕರ್ನಾಟಕ

karnataka

ETV Bharat / city

ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿಗೆ ಕೊರೊನಾ.. ಆರೋಗ್ಯ ಸ್ಥಿತಿ ಸ್ಥಿರ - ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ

ಎಸ್​ಡಿಎಂ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಆಡಳಿತ ಮಂಡಳಿ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮಕ್ಕೆ ಅಗತ್ಯ ಕ್ರಮ ವಹಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

chennaveera
ಚೆನ್ನವೀರ ಕಣವಿ

By

Published : Jan 15, 2022, 10:02 PM IST

ಧಾರವಾಡ:ಕೊರೊನಾ ಸೋಂಕಿನಿಂದ ಬಳಲುತ್ತಿರುವಹಿರಿಯ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರು ಇಲ್ಲಿನ ಎಸ್​ಡಿಎಂ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಈಗ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಎಸ್​ಡಿಎಂ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ಆಡಳಿತ ಮಂಡಳಿ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಡಾ.ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮಕ್ಕೆ ಅಗತ್ಯ ಕ್ರಮವಹಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಹಿರಿಯ ಸಾಹಿತಿ ಕಣವಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದಾಗ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದೆ.

ಇದನ್ನೂ ಓದಿ:ಮುಷ್ಕರ ಬಿಟ್ಟು ಬೋಧನೆಗೆ ಹಿಂದಿರುಗಿ.. ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಸಚಿವ ಅಶ್ವತ್ಥ್​ನಾರಾಯಣ ಮನವಿ

ABOUT THE AUTHOR

...view details