ಕರ್ನಾಟಕ

karnataka

ETV Bharat / city

ಅಕ್ಷರ ದಾಸೋಹ ಅಧಿಕಾರಿ ಶ್ರೀಧರ ಪತ್ತಾರ್ ಕೋವಿಡ್‌ನಿಂದ ನಿಧನ - ಕೋವಿಡ್‌ ಸಾವು ಸುದ್ದಿ

ಮೂಲತಃ ಬೆಳಗಾವಿ ಜಿಲ್ಲೆಯ ಮೂಡಲಗಿಯವರಾದ ಶ್ರೀಧರ ಪತ್ತಾರ್ ಅನಾರೋಗ್ಯದ ನಿಮಿತ್ತ ಮೂಡಲಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು.

ಶ್ರೀಧರ ಪತ್ತಾರ್
ಶ್ರೀಧರ ಪತ್ತಾರ್

By

Published : May 19, 2021, 8:59 AM IST

ಹುಬ್ಬಳ್ಳಿ:ಹುಬ್ಬಳ್ಳಿ ತಾಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ ಪತ್ತಾರ್ ಬಾಗಲಕೋಟೆಯಲ್ಲಿ ಕೋವಿಡ್‌ನಿಂದಾಗಿ ನಿಧನ ಹೊಂದಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಮೂಡಲಗಿಯವರಾದ ಶ್ರೀಧರ ಪತ್ತಾರ್ ಅನಾರೋಗ್ಯದ ನಿಮಿತ್ತ ಮೂಡಲಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸಿದೆ ಮೃತರಾಗಿದ್ದಾರೆ.

ಪ್ರತಿಭಾವಂತರಾಗಿದ್ದ ಶ್ರೀಧರ ಪತ್ತಾರ್ ಆರಂಭದಲ್ಲಿ ಅಂಚೆ ಇಲಾಖೆಯಲ್ಲಿ ಕೆಲಸ ನಿರ್ವಹಿಸಿ ನಂತರ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಿಕ್ಷಕರಾಗಿ, ಪ್ರೌಢ ಶಾಲೆ ಸಹ ಶಿಕ್ಷಕರಾಗಿ ಕೆಲಸ ನಿರ್ವಹಿಸಿದ್ದರು. ಕೆಇಎಸ್ ಪರೀಕ್ಷೆ ಪಾಸ್​ ಮಾಡಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿದ್ದರು.

ಶ್ರೀಧರ ಪತ್ತಾರ್ ನಿಧನಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೋರಿದ್ದಾರೆ.

ಇದನ್ನೂ ಓದಿ:ಕಾರವಾರ: ಸೈಕ್ಲೋನ್ ಅಬ್ಬರದಿಂದ ಕಾಳಿ ನದಿಯಲ್ಲಿ ಸಿಲುಕಿ ಸಾವನ್ನೇ ಗೆದ್ದು ಬಂದ ವೃದ್ಧ!

ABOUT THE AUTHOR

...view details