ಹುಬ್ಬಳ್ಳಿ:ಎಸಿಬಿ ಹಾಗೂ ಲೋಕಾಯುಕ್ತದ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಅವರು ವಾಗ್ದಾಳಿ ನಡೆಸಿದರು.
ಲೋಕಾಯುಕ್ತದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗಿಲ್ಲ: ಜಗದೀಶ್ ಶೆಟ್ಟರ್ ವಾಗ್ದಾಳಿ - ಎಸಿಬಿ ಬಗ್ಗೆ ನಮ್ಮ ನಿಲುವು ಏನು ಎಂಬುವುದನ್ನು ನಾವು ಅಧಿವೇಶನದಲ್ಲಿ ಹೇಳುತ್ತೇವೆ
ಎಸಿಬಿ ಹಾಗೂ ಲೋಕಾಯುಕ್ತದ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
![ಲೋಕಾಯುಕ್ತದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗಿಲ್ಲ: ಜಗದೀಶ್ ಶೆಟ್ಟರ್ ವಾಗ್ದಾಳಿ Kn_hbl_02_jagadish_shetter_avb_7208089](https://etvbharatimages.akamaized.net/etvbharat/prod-images/768-512-6081265-thumbnail-3x2-mn.jpg)
ಸಿದ್ದರಾಮಯ್ಯ ಲೋಕಾಯುಕ್ತದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಜಗದೀಶ್ ಶೆಟ್ಟರ್ ವಾಗ್ದಾಳಿ
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್
ಐದು ವರ್ಷ ಅಧಿಕಾರದಲ್ಲಿದ್ದ ಸಿದ್ದರಾಮಯ್ಯನವರು ಯಾಕೆ ಎಸಿಬಿ ರದ್ದು ಮಾಡಲಿಲ್ಲ. ಈಗ ಎಸಿಬಿ ವಿಫಲತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಬಿಜೆಪಿ ಬಗ್ಗೆ ನರೇಂದ್ರ ಮೋದಿಯವರ ಬಗ್ಗೆ ಅವರಿಗೆ ಯಾವ ವಿಷಯ ಸಿಗುತ್ತಿಲ್ಲ ಹೀಗಾಗಿ ಕುಂಟು ನೆಪ ಹೇಳುವ ಮೂಲಕ ಎಸಿಬಿ ರದ್ದುಪಡಿಸಲು ಹೇಳುತ್ತಿದ್ದಾರೆ ಎಂದು ಶೆಟ್ಟರ್ ಕಿಡಿಕಾರಿದರು.