ಕರ್ನಾಟಕ

karnataka

ETV Bharat / city

ಬಿಜೆಪಿ ಈಗ ಸಾಂಸ್ಕೃತಿಕ ಭಯೋತ್ಪಾದನೆ ಮಾಡುತ್ತಿದೆ: ಸಿದ್ದರಾಮಯ್ಯ ಕಿಡಿ - ಆರ್​ಎಸ್​ಎಸ್ ಜನ್ಮ ತಾಳಿ 97 ವರ್ಷ ಆಗಿದ್ದರೂ ದಲಿತರಿಗೆ ಉನ್ನತ ಹುದ್ದೆಗಳನ್ನು ನೀಡಿಲ್ಲ

ಚಲುವಾದಿ ನಾರಾಯಣ ಸ್ವಾಮಿ ಟ್ವೀಟ್​ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಬಿಜೆಪಿ, ಆರ್​ಎಸ್​ಎಸ್ ಜನ್ಮ ತಾಳಿ 97 ವರ್ಷ ಆಗಿದ್ದರೂ ದಲಿತರಿಗೆ ಉನ್ನತ ಹುದ್ದೆಗಳನ್ನು ನೀಡಿಲ್ಲ ಎಂದು ದೂರಿದರು.

Siddaramaiah
ಸಿದ್ದರಾಮಯ್ಯ

By

Published : Jun 8, 2022, 1:45 PM IST

ಹುಬ್ಬಳ್ಳಿ:ಬಿಜೆಪಿ, ಆರ್​ಎಸ್​ಎಸ್ ಜನ್ಮ ತಾಳಿ 97 ವರ್ಷ ಆಗಿದೆ. ಈವರೆಗೂ ದಲಿತರನ್ನು ಹಿಂದುಳಿದವರನ್ನು ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆ ಕೇಳಿದ್ದೆ ಎಂದು ಹೇಳುವ ಮೂಲಕ ಚಲುವಾದಿ ನಾರಾಯಣ ಸ್ವಾಮಿ ಟ್ವೀಟ್​ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಪಠ್ಯ ಪುಸ್ತಕ ವಿಚಾರದಲ್ಲಿ ಸಾಂಸ್ಕೃತಿಕ ಭಯೋತ್ಪಾದನೆ ಮಾಡುತ್ತಿದೆ. ಧಾರ್ಮಿಕ ವಿಚಾರಗಳಲ್ಲಿ ಬೆಂಕಿ ಹಚ್ಚುವುದೇ ಬಿಜೆಪಿಯ ಕೆಲಸ ಎಂದು ಕಿಡಿಕಾರಿದರು.

ಬಿಜೆಪಿ ಈಗ ಸಾಂಸ್ಕೃತಿಕ ಭಯೋತ್ಪಾದನೆ ಮಾಡುತ್ತಿದೆ

ಪಿಎಸ್‌ಐ ಮರು ಪರೀಕ್ಷೆಗೆ ಅವಕಾಶ ಮಾಡಿಕೊಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಪಿಎಸ್ಐ ಅಭ್ಯರ್ಥಿಗಳು ಒತ್ತಡ ಹಾಕಿದರು. ಈ ವೇಳೆ, ಮಾತನಾಡಿದ ಅಭ್ಯರ್ಥಿಯೊಬ್ಬ ಪ್ರತಿಭಾವಂತ ವಿದ್ಯಾರ್ಥಿಗಳ ಜತೆಗೆ ಸರ್ಕಾರ ಚೆಲ್ಲಾಟ ಆಡುತ್ತಿದೆ. ಪಿಎಸ್ಐ ಹಗರಣದ ಬಗ್ಗೆ ಒಂದು ಕಡೆ ತನಿಖೆ ನಡೆಯುತ್ತಿದೆ. ಹೀಗಿರುವಾಗ ಮರು ಪರೀಕ್ಷೆಗೆ ಆದೇಶ ಮಾಡಿದ್ದು ಏಕೆ..? ಎಂದು ಪ್ರಶ್ನಿಸಿದರು.

ಸಿಐಡಿ ಈಗಾಗಲೇ ನಮ್ಮನ್ನು ವಿಚಾರಣೆ ಮಾಡಿದೆ. ಇನ್ನೂ ಹತ್ತು ತನಿಖಾ ಸಂಸ್ಥೆಗಳು ನಮ್ಮನ್ನ ವಿಚಾರಣೆ ಮಾಡಲಿ. ತಪ್ಪಿತಸ್ಥರಿಗೆ ಶಿಕ್ಷಯಾಗಲಿ, ಉಳಿದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ನೀಡಲಿ. ನಾವು ಕಾನೂನು ಹೋರಾಟಕ್ಕೂ ಸಿದ್ದರಿದ್ದೇವೆ. ಸರ್ಕಾರ ಎಚ್ಚೆತ್ತೊಕೊಂಡು ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಅಳಲು ತೋಡಿಕೊಂಡರು.

ಇದನ್ನೂ ಓದಿ:ಇನ್ನೂ 10ವರ್ಷ ಸಕ್ರಿಯ ರಾಜಕಾರಣದಲ್ಲಿರುತ್ತೇನೆ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ABOUT THE AUTHOR

...view details