ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದ್ದು, ಬಹುನಿರೀಕ್ಷಿತ ಸ್ಮಾರ್ಟ್ ಸಿಟಿ ಯೋಜನೆಯ 4 ಕಾಮಗಾರಿಗಳು ಆರಂಭಗೊಂಡಿವೆ.
ವಾಣಿಜ್ಯ ನಗರಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಪುನಾರಂಭ - hubli news
ಹುಬ್ಬಳ್ಳಿಯ ಬಹುನಿರೀಕ್ಷಿತ ಸ್ಮಾರ್ಟ್ ಸಿಟಿ ಯೋಜನೆಯ 4 ಕಾಮಗಾರಿಗಳು ಆರಂಭಗೊಂಡಿದ್ದು, ನಿತ್ಯ ಕಾರ್ಮಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ ಎಂದು ಸ್ಮಾರ್ಟ್ ಸಿಟಿ ವಿಶೇಷಾಧಿಕಾರಿ ಎಸ್.ಎಚ್.ನರೇಗಲ್ ತಿಳಿಸಿದ್ದಾರೆ.

ನಗರದ ತೋಳನ ಕೆರೆ ಉದ್ಯಾನ ಅಭಿವೃದ್ಧಿ, ರಾಮಲಿಂಗೇಶ್ವರ ನಗರ, ಕೈಗಾರಿಕಾ ಪ್ರದೇಶವಾದ ಕುಮಾರೇಶ್ವರ ನಗರ ಹಾಗೂ ಮಂಜುನಾಥ ನಗರದಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿವೆ. ಮತ್ತೊಂದೆಡೆ ಕಂಟೈನ್ಮೆಂಟ್ ವ್ಯಾಪ್ತಿಗೆ ಸೇರಿರುವ ತಬೀಬಲ್ಯಾಂಡ್, ತೊರವಿಗಲ್ಲಿ ಹಾಗೂ ಬೆಂಗೇರಿಯಲ್ಲಿ ನಡೆಯುತ್ತಿದ್ದ ಕೆಲಸಗಳನ್ನ ನಿಲ್ಲಿಸಲಾಗಿದೆ. ಕಾಮಗಾರಿಗಳನ್ನು ಶೇ 50ರಷ್ಟು ಕಾರ್ಮಿಕರೊಂದಿಗೆ ಆರಂಭಿಸಬೇಕು ಎಂಬ ಸೂಚನೆ ಮೇರೆಗೆ ಕೆಲಸಗಳು ಆರಂಭಗೊಂಡಿದ್ದು,ನಿತ್ಯ ಕಾರ್ಮಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಅಗತ್ಯವಿರುವವರಿಗೆ ಆರೋಗ್ಯ ತಪಾಸಣೆಯೂ ಮಾಡುವಂತೆ ಸೂಚನೆ ನೀಡಲಾಗಿದೆ. ಕಾರ್ಮಿಕರು ಮಾಸ್ಕ್ ಧರಿಸಿಯೇ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ವಿತರಿಸಲಾಗಿದೆ ಎಂದು ಸ್ಮಾರ್ಟ್ ಸಿಟಿ ವಿಶೇಷಾಧಿಕಾರಿ ಎಸ್.ಎಚ್.ನರೇಗಲ್ ತಿಳಿಸಿದ್ದಾರೆ.