ಹುಬ್ಬಳ್ಳಿ:ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿರುವ ಕೊರೊನಾ ವೈರಸ್ ರಾಜ್ಯಕ್ಕೂ ಲಗ್ಗೆ ಇಟ್ಟಿದೆ. ಇದರಿಂದ ತಕ್ಷಣ ಎಚ್ಚೆತ್ತುಕೊಂಡಿರುವ ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆ ಹಾಗೂ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದ್ದಾರೆ.
ಅಂತಾಜ್ಯಗಳಿಗೆ ರೈಲು ಮೂಲಕ ಪ್ರತಿದಿನ ಸಾವಿರಾರು ಪ್ರಯಾಣಿಕರು ತೆರಳುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನೈಋತ್ಯ ರೈಲ್ವೆ ವಲಯದ ನಿಲ್ದಾಣಗಳಲ್ಲಿ ಕೋವಿಡ್-19 ರೋಗದ ತಪಾಸಣೆ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ನೈಋತ್ಯ ರೈಲ್ವೆ ಇಲಾಖೆ ನೂತನ ಪ್ರಯೋಗವೊಂದನ್ನು ಕೈಗೆತ್ತಿಕೊಂಡಿದೆ.