ಧಾರವಾಡ:ಕೊರೊನಾ ವೈರಸ್ ಹಾವಳಿಯಿಂದ ಜನರಿಗೆ ಅನಾನುಕೂಲತೆ ಹೆಚ್ಚಾಗಿದೆ. ಆದರೆ ವೈರಸ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ರೀತಿಯ ಪ್ರಯತ್ನ ನಡೆಸಿದೆ. ಸೋಂಕು ಕಾಣಿಸಿಕೊಂಡವರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಧಾರವಾಡ ಕೋವಿಡ್ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯ
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಡಾ. ಬಿ.ಡಿ.ಜತ್ತಿ ಹೋಮಿಯೋಪತಿ ಕಾಲೇಜು ಸಹಯೋಗದಲ್ಲಿ ಜಿಲ್ಲಾಡಳಿತ ಸ್ಥಾಪಿಸಿರುವ ಕೋವಿಡ್ ಕಾಳಜಿ ಕೇಂದ್ರದಲ್ಲಿ ದಾಖಲಾದ ಕೊರೊನಾ ರೋಗಿಗಳಿಗೆ ಔಷಧ ಹಾಗೂ ಊಟೋಪಚಾರದ ಜೊತೆಗೆ ಅವರಲ್ಲಿ ಮಾನಸಿಕವಾಗಿ ಧೈರ್ಯ ತುಂಬಲು ವಿವಿಧ ಕ್ರೀಡಾ ಚಟುವಟಿಕೆಗಳು ಹಾಗೂ ರಸಮಂಜರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಧಾರವಾಡ ಕೋವಿಡ್ ಕಾಳಜಿ ಕೇಂದ್ರ

ಪ್ರತಿದಿನ ಯೋಗಾಭ್ಯಾಸ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಲಾಗುತ್ತಿದೆ ಎಂದು ಧಾರವಾಡ ತಹಶೀಲ್ದಾರ್ ಸಂತೋಷ ಬಿರಾದರ ತಿಳಿಸಿದ್ದಾರೆ.