ಕರ್ನಾಟಕ

karnataka

ETV Bharat / city

ಚನ್ನವೀರ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಘೋಷಣೆ - ಕೋವಿಡ್​ನಿಂದ ಚಿಕಿತ್ಸೆ ಪಡೆಯುತ್ತಿರುವ ಚೆನ್ನವೀರ ಕಣವಿ

ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ. ಅವರು ಗುಣಮುಖರಾಗಿ ಬರುವುದೇ ರಾಜ್ಯದ ಸೌಭಾಗ್ಯ ಎಂದು ಸಿಎಂ ಬೊಮ್ಮಾಯಿ ಬರೆದುಕೊಂಡಿದ್ದಾರೆ.

chennaveera
ಸಿಎಂ ಘೋಷಣೆ

By

Published : Jan 20, 2022, 8:28 PM IST

ಧಾರವಾಡ:ಕೊರೊನಾ ಸೋಂಕಿನಿಂದ ಎಸ್​ಡಿಎಂ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಚನ್ನವೀರ ಕಣವಿ ಅವರ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಚನ್ನವೀರ ಕಣವಿ ಅವರು ರಾಜ್ಯ ಕಂಡ ಅತ್ಯಂತ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಈ ರಾಜ್ಯದ ಭೌದ್ಧಿಕ ಸಂಪತ್ತಾಗಿದ್ದಾರೆ. ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾದಾಗ ಅವರಿಗೆ ಕೋವಿಡ್​ ಇರುವುದು ಗೊತ್ತಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಮುಂದುವರಿಸಲಾಗಿದೆ. ಕಣವಿ ಅವರು ಶೀಘ್ರ ಗುಣಮುಖರಾಗಿ ಮತ್ತೆ ಸಹಜ ಜೀವನ ನಡೆಸುವಂತಾಗಿಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೋವಿಡ್​ 3ನೇ ಅಲೆ ನಡುವೆ ಶಾಲೆಗಳ ಪುನಾರಂಭ... ಸೋಮವಾರದಿಂದ 1-12ನೇ ತರಗತಿ ಮಕ್ಕಳು ಶಾಲೆಗೆ!

ಅಲ್ಲದೇ, ಚನ್ನವೀರ ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ. ಅವರು ಗುಣಮುಖರಾಗಿ ಬರುವುದೇ ರಾಜ್ಯದ ಸೌಭಾಗ್ಯ ಎಂದು ಸಿಎಂ ಬೊಮ್ಮಾಯಿ ಬರೆದುಕೊಂಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details