ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ನಿಷೇಧಾಜ್ಞೆ ಮುಂದುವರೆಸಿ ಹು-ಧಾ ಅವಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ. ಏ.17ರ ರಾತ್ರಿ ನಡೆದಿದ್ದ, ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏ.20ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸದ್ಯ ಈ ನಿಷೇಧಾಜ್ಞೆಯ ಅವಧಿ ವಿಸ್ತರಿಸಿದ ಆದೇಶ ನೀಡಲಾಗಿದ್ದು, ಏ. 23ರವರೆಗೆ ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ.
ಹಳೆ ಹುಬ್ಬಳ್ಳಿ ಠಾಣೆ ಸೇರಿದಂತೆ ದಕ್ಷಿಣ ವಿಭಾಗದ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಅವಧಿ ವಿಸ್ತರಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.
115 ಜನರ ಬಂಧನ: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೂರು ತಂಡಗಳನ್ನು ರಚಿಸಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಈವರೆಗೆ 115 ಜನರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪೊಲೀಸರನ್ನೇ ಗುರಿಯಾಗಿಸಿಕೊಂಡು ದಾಂಧಲೆ ಮಾಡಿದ್ದ ಪುಂಡರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಲ್ಲಿಯವರೆಗೂ 200ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅದರಲ್ಲಿ ಇದೀಗ 115 ಜನರನ್ನು ಬಂಧಿಸಲಾಗಿದೆ. ಸದ್ಯ ಗಲಭೆಗೆ ಕಾರಣರಾದ ಮತ್ತಷ್ಟು ಗಲಭೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ ಗಲಭೆ ಪ್ರಕರಣ..104 ಮಂದಿ ಆರೋಪಿಗಳ ಬಂಧನ ಕುರಿತು ಪೊಲೀಸ್ ಕಮಿಷನರ್ ಮಾಹಿತಿ