ಕರ್ನಾಟಕ

karnataka

ETV Bharat / city

ಕರ್ಫ್ಯೂ ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ: ಪೊಲೀಸ್​ ಅಧಿಕಾರಿಗಳ ಖಡಕ್ ಎಚ್ಚರಿಕೆ

ಕೊರೊನಾ ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ವೀಕೆಂಡ್​, ನೈಟ್​ ಕರ್ಫ್ಯೂ ಜಾರಿ ಮಾಡಿದೆ. ಇದರಂತೆ ರಾಯಚೂರು ಮತ್ತು ಹುಬ್ಬಳ್ಳಿ ಜಿಲ್ಲಾಡಳಿತ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವೀಕೆಂಡ್​ ಕರ್ಫ್ಯೂ ಜಾರಿ ಕಟ್ಟುನಿಟ್ಟಿನ ಜಾರಿಗೆ ಮುಂದಾಗಿದೆ.

By

Published : Jan 7, 2022, 7:45 PM IST

police
ಪೊಲೀಸ್​

ರಾಯಚೂರು/ಹುಬ್ಬಳ್ಳಿ:ಕೊರೊನಾ ನಿಗ್ರಹಕ್ಕಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ವೀಕೆಂಡ್​, ನೈಟ್​ ಕರ್ಫ್ಯೂ ಜಾರಿ ಮಾಡಿದೆ. ಇದರಂತೆ ರಾಯಚೂರು ಮತ್ತು ಹುಬ್ಬಳ್ಳಿ ಜಿಲ್ಲಾಡಳಿತ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವೀಕೆಂಡ್​ ಕರ್ಫ್ಯೂ ಜಾರಿ ಕಟ್ಟುನಿಟ್ಟಿನ ಜಾರಿಗೆ ಮುಂದಾಗಿದೆ.

ತುರ್ತು ಸೇವೆಗೆ ಮಾತ್ರ ಹೊರಬನ್ನಿ: ನಿಖಿಲ್​

ರಾಯಚೂರು ಜಿಲ್ಲೆಯಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ತುರ್ತು ಸೇವೆಗಳು ಹೊರತುಪಡಿಸಿ, ಅನಗತ್ಯವಾಗಿ ಓಡಾಡಿದರೆೆ ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್​ ವರಿಷ್ಠಾಧಿಕಾರಿ ಬಿ.ನಿಖಿಲ್​ ಎಚ್ಚರಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಹೀಗಾಗಿ ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ತಿಳಿಸಿದರು.

ಆಯಾ ಠಾಣಾ ವ್ಯಾಪ್ತಿಯ ಪೊಲೀಸರಿಂದ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಆಟೋಗಳ ಮೂಲಕ ಅನೌನ್ಸ್​ಮೆಂಟ್, ಡಂಗುರ, ತಮಟೆ ಹೊಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಅಂಗಡಿ- ಮುಂಗಟ್ಟುಗಳ ಅಸೋಸಿಯೇಷನ್​ಗಳಿಗೆ ನೋಟಿಸ್ ನೀಡಲಾಗಿದೆ ಎಂದರು.

ಶನಿವಾರ ಹಾಗೂ ಭಾನುವಾರ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ. ನಗರದಲ್ಲಿ 120 ಪೊಲೀಸ್ ಸಿಬ್ಬಂದಿ, 15 ಚೆಕ್​ಪೋಸ್ಟ್ ಮೂಲಕ ಬಂದೋಬಸ್ತ್ ಹಾಕಲಾಗಿದೆ. ಜಿಲ್ಲೆಯಾದ್ಯಂತ ಮೂರು ಸಬ್​ಡಿವಿಷನ್​ಗಳನ್ನು ಮಾಡಲಾಗಿದೆ. ಆಂಧ್ರ ಹಾಗೂ ತೆಲಂಗಾಣ ಗಡಿ ಭಾಗದಲ್ಲೂ ಹೆಚ್ಚುವರಿ ಚೆಕ್​ಪೋಸ್ಟ್ ಹಾಕಲಾಗಿದೆ ಎಂದು ಮಾಹಿತಿ ನೀಡಿದರು.

ಕೋವಿಡ್​ ನಿರ್ಬಂಧ ಪಾಲಿಸಿ: ಲಾಭುರಾಮ್

ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅನಗತ್ಯ ಓಡಾಟ ಮಾಡುವವರ ವಿರುದ್ದ ಕ್ರಮ‌ ಕೈಗೊಳ್ಳಲಾಗುವುದು. ಪ್ರಮುಖ ರಸ್ತೆಗಳಲ್ಲಿ ಚೆಕ್​ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಲಾಭುರಾಮ್ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಇಂದು ರಾತ್ರಿ 8 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಎಲ್ಲೆಡೆಯೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

ಎಪಿಎಂಸಿಯಲ್ಲಿ ನಾಳೆ, ನಾಡಿದ್ದು ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯಾಪಾರ ಮಾಡಬೇಕು. ಎಪಿಎಂಸಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ನಿಯಮಗಳನ್ನು ಪಾಲಿಸುವ ಕುರಿತು ಎಪಿಎಂಸಿ ಅಧಿಕಾರಿಗಳ ಜೊತೆ ಮಾತುಕತೆ ಮಾಡಲಿದ್ದೇವೆ. ಜನರು ಪೊಲೀಸ್​ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ರಾಯಚೂರು : ಕೊರೊನಾ ಭೀತಿಯಿಂದಾಗಿ ಅಂಬಾದೇವಿ ಜಾತ್ರೆ ರದ್ದು

ABOUT THE AUTHOR

...view details