ಹುಬ್ಬಳ್ಳಿ:ಕೊರೊನಾ ಲಾಕ್ಡೌನ್ ನಂತರಶಾಲೆ-ಕಾಲೇಜಿನತ್ತ ಮುಖಮಾಡಿದ ವಿದ್ಯಾರ್ಥಿಗಳು ಸೂಕ್ತ ಬಸ್ಗಳು ದೊರಕದೇ ಹೆಚ್ಚಿನ ಬಸ್ ಸೇವೆ ಒದಗಿಸುವಂತೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಕೋವಿಡ್ ನಿಯಮ ಪಾಲಿಸಿ ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸಾರಿಗೆ ಸಂಸ್ಥೆ ಮಾತ್ರ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ಸೌಲಭ್ಯ ಒದಗಿಸದೇ ನಿರ್ಲಕ್ಷ್ಯ ವಹಿಸಿರುವ ಆರೋಪ ಹುಬ್ಬಳ್ಳಿಯಲ್ಲಿ ಕೇಳಿ ಬಂದಿದೆ.
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶಾಲಾ-ಕಾಲೇಜು ಆರಂಭ ಹಿನ್ನೆಲೆ ಬಸ್ ಕಾರ್ಯಾಚರಣೆ ಹೆಚ್ಚಿಸಬೇಕಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಸಡ್ಡೆ ತೋರಿರುವುದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಬಸ್ನಲ್ಲಿ ಪ್ರಯಾಣ ಮಾಡಲು ಯಾವುದೇ ಸ್ಥಳಾವಕಾಶ ಇಲ್ಲದೇ ದಿನಪೂರ್ತಿ ಕಾಯುವಂತಾಗಿದೆ.
ಹುಬ್ಬಳ್ಳಿ ಹಾಗೂ ಲಕ್ಷ್ಮೇಶ್ವರ ಮಾರ್ಗದಲ್ಲಿ ಇಂತಹದೊಂದು ಅವ್ಯವಸ್ಥೆಯಾಗಿದೆ. ಪ್ರತಿದಿನ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಲು ಹೆಣಗಾಡುವಂತಾಗಿದ್ದು, ಸರ್ಕಾರ ಹಾಗೂ ಸಾರಿಗೆ ಸಂಸ್ಥೆ ಮಾತ್ರ ಕಣ್ಣು ತೆರೆದು ನೋಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.