ಹುಬ್ಬಳ್ಳಿ: ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸ್ ವಾಹನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಪಿಎಸ್‌ಐಯನ್ನು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಅಮಾನತು ಮಾಡಿ ಆದೇಶ ನೀಡಿದ್ದಾರೆ.
ಹುಬ್ಬಳ್ಳಿಯ ಪೊಲೀಸ್ ಅರಣ್ಯ ಘಟಕದ ಪಿಎಸ್‌ಐ ಶಿವಾನಂದ ಅರೆನಾಡ್ ಅಮಾನತು ಆಗಿದ್ದಾರೆ. ಏ-17 ರಂದು ಅರಣ್ಯ ಘಟಕಕ್ಕೆ ಸೇರಿದ KA-25 G-303 ವಾಹನವನ್ನ ತಮ್ಮ ಪರಿಚಯಸ್ಥರ ಬಳಕೆಗೆ ಪಿಎಸ್ ಐ ನೀಡಿದ್ದರು. ಅವರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯ ಹಿತ್ತಲಮಕ್ಕಿ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದರು.