ಕರ್ನಾಟಕ

karnataka

ETV Bharat / city

ಅಲ್ರೀ,, ಹಾಲು ಕುಡಿದ ಮಕ್ಕಳೇ ಬದುಕಲ್ಲ, ಅಂತಹದ್ರಲ್ಲಿ ವಿಷ ಕುಡಿದವ್ರು... ಸಿದ್ದರಾಮಯ್ಯ ಪ್ರಶ್ನೆ - ದೇವೇಗೌಡರ ಕುಟುಂಬ

ನೆರೆ ಹಾನಿಯಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದ್ದು, ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ತರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಬಿಜೆಪಿ ವಾಮ ಮಾರ್ಗದಿಂದ ಸರ್ಕಾರ ರಚನೆ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಸಿದ್ದರಾಮಯ್ಯ

By

Published : Aug 26, 2019, 12:04 PM IST

ಹುಬ್ಬಳ್ಳಿ: ಬಿಎಸ್​ವೈ ಸರ್ಕಾರ ಬಹಳ ದಿನ ಇರುತ್ತೆ ಅಂತಾ ಯಾರಿಗೂ ನಂಬಿಕೆ ಇಲ್ಲ. ರೆಬೆಲ್ಸ್ ಶಾಸಕರನ್ನಿಟ್ಟುಕೊಂಡು ಸರ್ಕಾರ ಮುನ್ನೆಡೆಸೋಕ್ಕಾಗುತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ..

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ಹಾಲು ಕುಡಿದ ಮಕ್ಕಳೇ ಬದುಕಲ್ಲ, ಅಂತಹುದರಲ್ಲಿ ಇನ್ನು ವಿಷ ಕುಡಿದವರು ಬದುಕ್ತಾರಾ'?. ಎಂದು ವ್ಯಂಗ್ಯವಾಗಿ ನುಡಿದಿದ್ದಾರೆ.

ದೇವೇಗೌಡರ ಕುಟುಂಬದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಭೈರತಿ, ಸೋಮಶೇಖರ್‌ರನ್ನ ನಾನು ಮುಂಬೈಗೆ ಕಳುಸಿದ್ದೇನೆ ಅಂತಾರೆ. ಹಾಗಾದ್ರೆ, ಜೆಡಿಎಸ್‌ನ ಹೆಚ್‌. ವಿಶ್ವನಾಥ್​, ನಾರಾಯಣಗೌಡ ಹಾಗೂ ಗೋಪಾಲಯ್ಯರನ್ನ ಕಳುಹಿಸಿದ್ದು ಯಾರು?. ಹೆಚ್​ಡಿಕೆ, ಹೆಚ್​ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ‌ ನೋಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಸಚಿವರು ನೆರೆ ಪೀಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ, ದೆಹಲಿ-ಬೆಂಗಳೂರು ಮಧ್ಯೆ ಟೂರ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ನೆರೆ ಹಾನಿಯಲ್ಲಿ ಭಾರೀ ಪ್ರಮಾಣದ ನಷ್ಟ ಉಂಟಾಗಿದ್ದು, ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ತರಿಸುವಲ್ಲಿ ಸರ್ಕಾರ ಕೆಲಸ ಮಾಡಿಲ್ಲ. ಬಿಜೆಪಿಯವರು ವಾಮ ಮಾರ್ಗದಿಂದ ಸರ್ಕಾರ ರಚನೆ ಮಾಡಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ.‌ ಇವತ್ತು ಗುಲಾಮ್‌ ನಬಿ ಆಜಾದ್ ಬರ್ತಾರೆ ಅಂತಾ ಕೇಳಿದ್ದೀನಿ. ಆದರೆ, ತಾನೀಗ ನೆರೆ ಪೀಡಿತ‌ ಪ್ರದೇಶಗಳ ಪ್ರವಾಸದಲ್ಲಿದ್ದೇನೆ ಎಂದರು.

ABOUT THE AUTHOR

...view details