ಕರ್ನಾಟಕ

karnataka

ETV Bharat / city

'ನದಿಗಳೆಲ್ಲಾ ಭರ್ತಿಯಾಗಿವೆ, ನೀವು ಹಾಕುವ ಬೆಂಕಿಗೆ ನೀರು ಸುರಿಯುವ ಸಾಮರ್ಥ್ಯ ನಮಗಿದೆ' - An Act further to amend the Citizenship Act

ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಕೆಲವರು ರಾಜಕೀಯ ಪ್ರೇರಿತ ಚರ್ಚೆಗಳನ್ನು ಹುಟ್ಟು ಹಾಕಿ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

The Citizenship (Amendment) Act 2019
ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

By

Published : Dec 19, 2019, 5:49 PM IST

ಧಾರವಾಡ: ರಾಷ್ಟ್ರೀಯತೆ ಗಮನದಲ್ಲಿಟ್ಟುಕೊಂಡು ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ರೂಪುಗೊಂಡಿದೆ. ಈ ಕಾಯಿದೆಯನ್ನು ಇಡೀ ರಾಷ್ಟ್ರವೇ ಸ್ವಾಗತಿಸಿದೆ. ಆದರೆ, ಅಧಿಕಾರ ಕಳೆದುಕೊಂಡ ಕೆಲವರು ಮಾತ್ರ ರಾಜಕೀಯ ಪ್ರೇರಿತ ಚರ್ಚೆಗಳನ್ನು ಹುಟ್ಟು ಹಾಕಿ ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬೆಂಕಿ ಬೀಳುತ್ತಿದೆ ಎಂದು ಯು.ಟಿ.ಖಾದರ್​​ ಅವರು ಬುಧವಾರ ಹೇಳಿದ್ದನ್ನು ಗಮನಿಸಿದ್ದೇನೆ. ವರುಣ ದೇವನ ಕೃಪೆಯಿಂದ ಕರ್ನಾಟಕದಲ್ಲಿ ಸಮೃದ್ಧವಾದ ಮಳೆಯಾಗಿದೆ.‌ ನದಿಗಳೆಲ್ಲ ಭರ್ತಿಯಾಗಿವೆ. ನೀವು ಹಾಕುವ ಬೆಂಕಿಗೆ ನೀರು ಹಾಕುವ ಸಾಮರ್ಥ್ಯ ನಮಗಿದೆ ಎಂದು ತಿರುಗೇಟು ನೀಡಿದರು.

ರಾಷ್ಟ್ರೀಯತೆಯಲ್ಲಿ ಒಂದಾಗಿ ಹೋಗಬೇಕಾದ ಅಗತ್ಯವಿದೆ ಎಂಬುದನ್ನು ಅವರು ಮನವರಿಕೆ ಮಾಡಿಕೊಳ್ಳಬೇಕು ಎಂದು ಖಾದರ್​​ಗೆ ಟಾಂಗ್ ನೀಡಿದ್ರು.

ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮೈತ್ರಿ ಸರ್ಕಾರ ಮಠಗಳಿಗೆ ನೀಡಿದ್ದ ಅನುದಾನವನ್ನು ದೇವಸ್ಥಾನಗಳಿಗೆ ಹಂಚುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ₹ 60 ಕೋಟಿಯನ್ನು ಮಠಗಳಿಗೆ ನೀಡುವ ಪ್ರಸ್ತಾವವಿದೆ. ಯಾವುದೇ ಸರ್ಕಾರ ಹಣ ನೀಡಿದ್ದರೂ, ಅದನ್ನು ನ್ಯಾಯಸಮ್ಮತವಾಗಿ ತಲುಪಿಸುತ್ತೇವೆ. ಮಠಗಳನ್ನು ನಿರ್ಲಕ್ಷಿಸುವುದಿಲ್ಲ. ಮಠಗಳಿಗೆ ನೀಡುವ ಹಣವನ್ನು ಯಾವ ದೇವಸ್ಥಾನಕ್ಕೂ ವರ್ಗಾಯಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಹಣಕಾಸಿನ ಹೊಂದಾಣಿಕೆ ವಿಷಯದಲ್ಲಿ ಮಾತ್ರ ಸ್ವಲ್ಪ ತಡವಾಗಿದೆ.‌ ಪರಿಶೀಲಿಸಿ ಬಿಡುಗಡೆ ಮಾಡುತ್ತೇವೆ. ನಮ್ಮ ಇಲಾಖೆಯಲ್ಲೇ ಹಣವಿದೆ ಅವರಿಗೆಲ್ಲ‌ ಹಣ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.

ABOUT THE AUTHOR

...view details