ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಲಿಸುವ ರೈಲಿಗೆ ತಲೆ ಕೊಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ನಗರದ ಹೊರವಲಯದಲ್ಲಿ ನಡೆದಿದೆ.
ರೈಲ್ವೆ ನಿಲ್ದಾಣದ ಕೂಗಳತೆ ದೂರದಲ್ಲಿಯೇ ದಂಪತಿ ರೈಲಿಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದು, ಸುಮಾರು 35 ರಿಂದ 40 ವಯಸ್ಸಿನ ಮಹಿಳೆ ಹಾಗೂ 45ರಿಂದ 50 ವಯಸ್ಸಿನ ಪುರುಷ ಸಾವಿಗೀಡಾಗಿದ್ದು, ದಂಪತಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.