ಕರ್ನಾಟಕ

karnataka

ETV Bharat / city

ಹುಬ್ಬಳ್ಳಿಯಲ್ಲಿ ಮಹಾರಾಷ್ಟ್ರದಿಂದ ಬಂದು ಆಸ್ಪತ್ರೆ ಸೇರಿದ್ದ ವ್ಯಕ್ತಿ​ ಪರಾರಿ - Kundagola Government Hospital

ಕೊರೊನಾ ಲಾಕ್​​ಡೌನ್​ ನಡುವೆಯೂ ಮಹಾರಾಷ್ಟ್ರದಿಂದ ಕಾಲ್ನಡಿಗೆಯಲ್ಲಿಯೇ ಹುಬ್ಬಳ್ಳಿಗೆ ಆಗಮಿಸಿದ ವ್ಯಕ್ತಿ ಇದೀಗ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಮಹಾರಾಷ್ಟ್ರದಿಂದ ಮರಳಿದ್ದಾಗ ಮನೆಯವರು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಈ ವೇಳೆ ಆಸ್ಪತ್ರೆಗೆ ಬಂದಿದ್ದ ಮಂಜುನಾಥ್​​ ಇದ್ದಕ್ಕಿದಂತೆ ಆಸ್ಪತ್ರೆಯಿಂದ ಪರಾರಿಯಾಗಿದ್ದು, ಸದ್ಯ ಪೊಲೀಸರು ಈತನ ಹುಡುಕಾಟ ನಡೆಸುತ್ತಿದ್ದಾರೆ.

The man who came from Maharashtra escaped from hospital
ಮಹಾರಾಷ್ಟ್ರದಿಂದ ಬಂದು ಆಸ್ಪತ್ರೆ ಸೇರಿದ್ದ ವ್ಯಕ್ತಿ ದಿಢೀರ್​ ಎಸ್ಕೇಪ್​​

By

Published : May 26, 2020, 11:18 PM IST

ಹುಬ್ಬಳ್ಳಿ:ಮಹಾರಾಷ್ಟ್ರದಿಂದ ನಡೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯಿಂದ ಯಾರಿಗೂ ಹೇಳದೆ ಕೇಳದೆ ಪರಾರಿಯಾಗಿರುವ ಘಟನೆ ಕುಂದಗೋಳ ತಾಲೂಕಿನ‌ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ (33) ಎಂಬಾತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದವನಾದ ಮಂಜುನಾಥ್ ಕೊರೊನಾ ಲಾಕ್​ಡೌನ್ ಮಧ್ಯದಲ್ಲಿಯೂ ಮಹಾರಾಷ್ಟ್ರದಿಂದ ನಡೆದುಕೊಂಡು ಗ್ರಾಮಕ್ಕೆ ಬಂದಿದ್ದ.

ಹೀಗಾಗಿ ಮನೆಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಒತ್ತಾಯಿಸಿದ್ದರು. ಮನೆಯವರ ಒತ್ತಾಯಕ್ಕೆ ಕುಂದಗೋಳ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದ. ಅಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಅಲ್ಲಿಯೂ ನಿಲ್ಲದೆ ಮಂಜುನಾಥ್ ಪರಾರಿಯಾಗಿದ್ದಾನೆ.

ಮಂಜುನಾಥ್ ಪರಾರಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಮಂಜುನಾಥ್​ಗಾಗಿ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಹುಡುಕಾಟ ನಡೆಸುತ್ತಿದೆ.

ABOUT THE AUTHOR

...view details