ಧಾರವಾಡ: ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ (ಜುಲೈ 5) ಬೆಳಗ್ಗೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಡಾ.ಬಿ.ಸುಶೀಲ ತಿಳಿಸಿದ್ದಾರೆ.
ಧಾರವಾಡ: ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ - The weekend curfew implemented in dharwad
ಧಾರವಾಡ ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಬಿ.ಸುಶೀಲ ತಿಳಿಸಿದ್ದಾರೆ.
ಜೂನ್ 20 ರಂದು ಹೊರಡಿಸಿದ ಆದೇಶದ ಅನುಬಂಧ (2) ರಲ್ಲಿ ತಿಳಿಸಿರುವಂತೆ, ನಾಳೆ ಶನಿವಾರ ಮತ್ತು ಭಾನುವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ದಿನಸಿ, ತರಕಾರಿ, ಹಾಲು, ಮಾಂಸಾಹಾರ ಸೇರಿದಂತೆ ಅಗತ್ಯವಸ್ತುಗಳು ಮತ್ತು ಮದ್ಯ ಮಾರಾಟಕ್ಕೆ ಅವಕಾಶವಿರುತ್ತದೆ. ಈ ಅವಧಿಯಲ್ಲಿ ಬೀದಿ ಬದಿ ವ್ಯಾಪಾರ ಚಟುವಟಿಕೆಗಳು ನಡೆಯಲಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ, ಹೋಟೆಲ್‍ಗಳಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿದೆ.
ತುರ್ತು ಸೇವೆಗೆ ಅವಕಾಶವಿದ್ದು, ಮಧ್ಯಾಹ್ನ 2 ಗಂಟೆಯ ನಂತರ ಅನಗತ್ಯ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಈಗಾಗಲೇ ಅನುಮತಿ ಪಡೆದಿರುವ ಮದುವೆ ಸಮಾರಂಭಗಳನ್ನು 40 ಕ್ಕಿಂತ ಹೆಚ್ಚು ಜನರು ಸೇರದಂತೆ ಆಯೋಜಿಸಬಹುದು. ಅಂತ್ಯಕ್ರಿಯೆಗಳಲ್ಲಿ ಗರಿಷ್ಠ 5 ಜನ ಮಾತ್ರ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.