ಹುಬ್ಬಳ್ಳಿ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕುಸುಗಲ್-ಇಂಗಳಹಳ್ಳಿ ರಸ್ತೆಯಲ್ಲಿ ನಡೆದಿದೆ.
ಕುಸುಗಲ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವು - ಕುಸುಗಲ್ ಅಪಘಾತ ಸುದ್ದಿ
ನಗರದ ಕುಸುಗಲ್-ಇಂಗಳಹಳ್ಳಿ ರಸ್ತೆಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟ್ರ್ಯಾಕ್ಟರ್ ಪಲ್ಟಿ
ಕುಸುಗಲ್ ಗ್ರಾಮದ ಉಸ್ಮಾನಸಾಬ ಖಾದೀರಸಾಬ ಡಂಬಳ (30), ಅಭಿಷೇಕ ಸಿದ್ಧಪ್ಪ ಈರಣ್ಣವರ (16) ಮೃತಪಟ್ಟ ಯುವಕರು. ಜಮೀನು ಕೆಲಸಕ್ಕೆಂದು ಹೋಗುವಾಗ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗಿಗೆ ನುಗ್ಗಿದೆ.
ಇದರಿಂದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.