ಹುಬ್ಬಳ್ಳಿ: ಕಿಮ್ಸ್ನಲ್ಲಿ ಸಾವಿಗೀಡಾದ ವ್ಯಕ್ತಿಯ ಶವ ತೆಗೆದುಕೊಂಡು ಬರಲು ಹೊರಟಿದ್ದ ಕ್ರೂಸರ್ಗೆ ಬಸ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ದುರ್ಘಟನೆ ನಡೆಯಿತು.
ಹಳಿಯಾಳ ತಾಲೂಕಿನ ನಂದಿಗಟ್ಟ ಗ್ರಾಮದ ಸಹೋದರರಾದ ಶಿವನಗೌಡ ಪಾಟೀಲ ಹಾಗೂ ಅಮೃತ ಪಾಟೀಲ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕ್ರೂಸರ್ ಚಾಲಕ ಮಾರುತಿ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಫಲಿಸದೇ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.