ಕರ್ನಾಟಕ

karnataka

ETV Bharat / city

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ.. ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿಯಾಗಿ ಇಬ್ಬರು ಸಾವು - Tanker and tractor collide

ಪುಣೆ-ಬೆಂಗಳೂರು ರಸ್ತೆಯ ಬುಡರಸಿಂಗಿ ಕ್ರಾಸ್ ಬಳಿ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Two died in tractor accident at hubli
ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಟ್ಯಾಂಕರ್‌

By

Published : Nov 6, 2021, 11:45 AM IST

ಹುಬ್ಬಳ್ಳಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಪುಣೆ-ಬೆಂಗಳೂರು ರಸ್ತೆಯ ಬುಡರಸಿಂಗಿ ಕ್ರಾಸ್ ಬಳಿ ಸಂಭವಿಸಿದೆ.

ಬಾಗಲಕೋಟೆಯ ಜಿಲ್ಲೆಯ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅಡವಿ ಸೋಮಾಪುರದ ಕಲ್ಮೇಶ ಜಾಧವ್​ (26) ಮೃತರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.

ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಟ್ಯಾಂಕರ್‌

ಟ್ರ್ಯಾಕ್ಟರ್‌ ಪಂಕ್ಚರ್‌ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದರು. ಮಹಾರಾಷ್ಟ್ರದ ಬಾವುಸಾಹೇಬ ಡಾಕನೆ ಎಂಬಾತ ಟ್ಯಾಂಕರ್‌ ಚಲಾಯಿಸಿಕೊಂಡು ಹಾವೇರಿ ಕಡೆಯಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ. ಈ ವೇಳೆ ಟ್ಯಾಂಕರ್ ಮೇಲಿನ ನಿಯಂತ್ರಣ ತಪ್ಪಿ, ಚಾಲಕ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟ್ರ್ಯಾಕ್ಟರ್ ಹಿಂದಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾನೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details