ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಮಂಟೂರು ರೋಡ್ನ ಮ್ಯಾಗ್ನೀಸ್ ಪ್ಲಾಟ್ನಲ್ಲಿ ನಡೆದಿದೆ. ಘಟನೆಯಲ್ಲಿ ವಿಜಯ ಹರಿಜನ್ ಎಂಬ ಯುವಕನಿಗೆ ಗಂಭೀರವಾದ ಗಾಯಗಳಾಗಿವೆ.
ಹಳೇ ದ್ವೇಷ: ಕುಡಿದ ಮತ್ತಿನಲ್ಲಿ ಹೊಡೆದಾಡಿಕೊಂಡ ಯುವಕರು - ಕಿಮ್ಸ್
ಕುಡಿದ ಮತ್ತಿನಲ್ಲಿ ಯುವಕರಿಬ್ಬರು ಹೊಡೆದಾಡಿಕೊಂಡು ನಂತರ ಚಿಕಿತ್ಸೆಗಾಗಿ ಕಿಮ್ಸ್ಗೆ ದಾಖಲಾಗಿದ್ದಾರೆ. ಆದರೆ ಕಿಮ್ಸ್ನಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಮತ್ತೆ ಯುವಕರು ಆಸ್ಪತ್ರೆ ವಿರುದ್ಧ ಗಲಾಟೆ ನಡೆಸಿದ್ದಾರೆ.
drunk friends fight
ಹಳೇ ದ್ವೇಷದ ಹಿನ್ನೆಲೆಯಲ್ಲಿ ಕುಡಿದು ಹೊಡೆದಾಡಿಕೊಂಡಿದ್ದಾರೆ. ಆದರೆ ಶರತ್ ಮತ್ತು ಮಂಜುನಾಥ ಎಂಬುವವರೇ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ವಿಜಯ ಸಂಬಂಧಿಗಳು ಆರೋಪಿಸಿದ್ದಾರೆ.
ಘಟನೆಯ ನಂತರ ಗಾಯಾಗಳು ಕಿಮ್ಸ್ಗೆ ದಾಖಲಾಗಿದ್ದಾರೆ. ಆದ್ರೆ ಕಿಮ್ಸ್ನಲ್ಲಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಎರಡೂ ಕಡೆಯವರು ಕಿರಿಕ್ ತಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಎರಡೂ ಕಡೆಯವರನ್ನು ಸಮಾಧಾನಪಡಿಸಿದ್ದಾರೆ. ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.