ಹುಬ್ಬಳ್ಳಿ: ನಗರದಲ್ಲಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ವಿಜಯಪುರ ಮೂಲದ ಇಬ್ಬರನ್ನು ಮಾದಕ ವಸ್ತುಗಳ ಮಾರಾಟ ಮತ್ತು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ... 1,200 ಗ್ರಾಂ ಗಾಂಜಾ ವಶಕ್ಕೆ - ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿಯ ಕಾರವಾರ ರಸ್ತೆಯ ಚರ್ಚ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವಿಜಯಪುರ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 1,200 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..1,200 ಗ್ರಾಂ ಗಾಂಜಾ ವಶಕ್ಕೆ
ಖಚಿತ ಮಾಹಿತಿ ಮೇರೆಗೆ ನಗರದ ಕಾರವಾರ ರಸ್ತೆಯ ಚರ್ಚ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು, ಮೈನುದ್ದಿನ್ (48) ಹಾಗೂ ಸಾದಿಕ್ (44) ಎಂಬುವವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 1,200 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.