ಧಾರವಾಡ:ರಸ್ತೆ ಬದಿ ರಾಜ್ಯ ರಸ್ತೆ ಸಾರಿಗೆ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಬೆಳವಟಗಿ ಫಾರ್ಮ್ ಬಳಿ ನಡೆದಿದೆ.
ಬಸ್ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ - ಬಸ್ ಪಲ್ಟಿ: ಇಬ್ವರಿಗೆ ಗಂಭೀರ ಗಾಯ
ನರಗುಂದದಿಂದ ನವಲಗುಂದ ಮಾರ್ಗವಾಗಿ ಗದಗ ಕಡೆ ಹೊರಟಿದ್ದ ರಾಜ್ಯ ರಸ್ತೆ ಸಾರಿಗೆ ಬಸ್ ಎದುರಿನಿಂದ ಬಂದ ಲಾರಿ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಗದ್ದೆಯಲ್ಲಿ ಪಲ್ಟಿಯಾಗಿದ್ದು,ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗದ್ದೆಯಲ್ಲಿ ಪಲ್ಟಿಯಾಗಿರುವ ಬಸ್
ನರಗುಂದದಿಂದ ನವಲಗುಂದ ಮಾರ್ಗವಾಗಿ ಗದಗ ಕಡೆ ಹೊರಟಿದ್ದ ಬಸ್ ಎದುರಿನಿಂದ ಬಂದ ಲಾರಿಯನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕ ಉರುಳಿ ರಸ್ತೆ ಬದಿಯ ಗದ್ದೆಯಲ್ಲಿ ಪಲ್ಟಿಯಾಗಿದೆ. ಬಸ್ನಲ್ಲಿದ್ದ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.