ಹುಬ್ಬಳ್ಳಿ :ಸತ್ತೂರಿನ ಎಸ್ಡಿಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ವಾಣಿಜ್ಯ ನಗರಿ ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.
ಹುಬ್ಬಳ್ಳಿಯ ಹೆಗ್ಗೇರಿಯಲ್ಲಿರುವ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅಯೋಧ್ಯೆಯಲ್ಲಿ ನಡೆದ ಆಯುರ್ವೇದ ಸೆಮಿನಾರ್ನಲ್ಲಿ ಭಾಗವಹಿಸಿದ್ದರು. ಕಳೆದ ನ. 27-28 ರಂದು ನಡೆದಿದ್ದ ಸಮಾವೇಶದಲ್ಲಿ 2 ಸಾವಿರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎನ್ನಲಾಗುತ್ತಿದೆ.