ಹುಬ್ಬಳ್ಳಿ:ಯಾರಿಗೆ ಆಗಲಿ ಬಲವಂತವಾಗಿ ಮತಾಂತರ ಮಾಡಿದ್ರೆ ಅದಕ್ಕೆ ಕಾನೂನು ಮತ್ತು ವೈಯಕ್ತಿಕವಾಗಿ ವಿರೋಧ ಇದೆ. ನಾವು ಹುಟ್ಟಿನಿಂದ ಬಂದ ಧರ್ಮವೇ ನಮ್ಮ ಧರ್ಮ ಆಗಿರುತ್ತದೆ. ಆದ್ರೆ ಯಾರದೋ ಬಲವಂತಕ್ಕಾಗಲಿ ಅಥವಾ ಎಮೋಷನಲ್ ಬ್ಲಾಕ್ ಮೇಲ್ನಿಂದಾಗಿ, ಬೇರೆ ಬೇರೆ ಅನುಕೂಲ ಮಾಡೋದಾಗಿ ಆಸೆ ಆಮಿಷವೊಡ್ಡಿ ಮತಾಂತರ ಮಾಡೋದು ಕಾನೂನು ವಿರುದ್ಧ ಎಂದು ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ತಾರಾ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಮಾತನಾಡಿದ ಅವರು, ಮತಾಂತರ ಮಾಡುವಂತಹ ಕೆಲಸಕ್ಕೆ ಬಲವಂತವಾಗಿ ಯಾರಾದ್ರೂ ಕೈ ಹಾಕಿದ್ರೆ ಅದು ಶಿಕ್ಷೆಗೆ ಅರ್ಹ. ಎಲ್ಲರಿಗೂ ವೈಯಕ್ತಿಕವಾದ ನಿರ್ಧಾರ ಇರುತ್ತೆ. ಆದ್ರೆ ಯಾರದೋ ಬಲವಂತಕ್ಕೆ ಒಳಗಾಗಬಾರದು ಅನ್ನೋದು ಸರ್ಕಾರದ ಕಾಳಜಿ ಎಂದರು.