ಧಾರವಾಡ: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ವಿನಯ್ ಕುಲಕರ್ಣಿಗೆ ಒಂದು ದಿನ ನ್ಯಾಯಾಂಗ ಬಂಧನ - ವಿನಯ ಕುಲಕರ್ಣಿ ಬಂಧನ
ಸಿಬಿಐ ವಶದಲ್ಲಿರುವ ವಿನಯ್ ಕುಲಕರ್ಣಿಗೆ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ. ಇದರಿಂದ ಮಾಜಿ ಸಚಿವರು ಒಂದು ದಿನ ಜೈಲಿನಲ್ಲಿಯೇ ಇರುವಂತಾಗಿದೆ.
ವಿನಯ ಕುಲಕರ್ಣಿ
ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಸಿಬಿಐ ಅಧಿಕಾರಿಗಳು ಕೇಳಿದರು. ಆದರೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ನ್ಯಾಯಾಲಯದಲ್ಲಿ ತಮಗೆ ವಿಚಾರಣೆ ವೇಳೆ ನೋಟಿಸ್ ನೀಡಿದ್ದರಾ, ಆರೋಗ್ಯ ತಪಾಸಣೆ ಮಾಡಿದ್ದರಾ ಎಂದು ನ್ಯಾಯಾಧೀಶರು ಮಾಜಿ ಸಚಿವರಿಗೆ ಪ್ರಶ್ನೆ ಕೇಳಿದರು ಎನ್ನಲಾಗಿದೆ. ನಾಳೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸುವ ಸಾಧ್ಯತೆಯಿದೆ.
Last Updated : Nov 5, 2020, 7:52 PM IST