ಹುಬ್ಬಳ್ಳಿ: ಎರಡು ತಿಂಗಳ ಹಿಂದೆ ಮದುವೆ... ಪತಿಯಿಂದಲೇ ಪತ್ನಿ ಕೊಲೆ? - ವರದಕ್ಷಿಣೆ ಕಿರುಕುಳ
ವರದಕ್ಷಿಣೆ ಕಿರುಕುಳಕ್ಕೆ ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಬಲಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಹುಬ್ಬಳ್ಳಿ:ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಆರೋಪ ಹುಬ್ಬಳ್ಳಿಯ ರಾಘವೇಂದ್ರ ಕಾಲೋನಿಯಲ್ಲಿ ಕೇಳಿಬಂದಿದೆ. ಮಂಜುಳಾ ಗಂಜಿಗಟ್ಟಿ (30) ಮೃತ ಮಹಿಳೆ.
ಕಳೆದ ಎರಡು ತಿಂಗಳ ಹಿಂದಷ್ಟೇ ಕರಿಬಸಪ್ಪ ಎಂಬ ಯುವಕನ ಜೊತೆ ವಿವಾಹವಾಗಿತ್ತು. ಮದುವೆ ವೇಳೆ ಸಾಕಷ್ಟು ವರೋಪಚಾರ ಕೂಡ ಮಾಡಲಾಗಿತ್ತು. ಆದ್ರೆ ಪತಿ ಕರಕಬಸಪ್ಪ ಹಾಗೂ ಕುಟುಂಬದವರು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ವರದಕ್ಷಿಣೆ ತರಲು ಸಾಧ್ಯವಿಲ್ಲ ಎಂದು ಮಂಜುಳಾ ವಾದಿಸಿದಕ್ಕೆ ಕರಿಬಸಪ್ಪ ಹಾಗೂ ಅವರ ಕುಟುಂಬದವರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.