ಕರ್ನಾಟಕ

karnataka

ETV Bharat / city

ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಮಹಿಳಾ ಸಂಘಟನೆ ಅಧ್ಯಕ್ಷೆಯಿಂದ ಹಲ್ಲೆ.... ಸಿಸಿಟಿವಿಯಲ್ಲಿ ದೃಶ್ಯ ಸೆರೆ - undefined

ಕ್ಷುಲ್ಲಕ ಕಾರಣಕ್ಕೆ ಮಹಿಳಾ ಸಂಘಟನೆ ಅಧ್ಯಕ್ಷೆ ಮತ್ತು ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದು, ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ

By

Published : Jun 24, 2019, 2:00 PM IST

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಕಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ

ರೇವಣ ಸಿದ್ದಪ್ಪ ಹಲ್ಲೆಗೊಳಗಾದ ಸಿಬ್ಬಂದಿ. ಮಹಿಳಾ ಸಂಘಟನೆ ಅಧ್ಯಕ್ಷೆ ಹಲ್ಲೆ ಮಾಡಿರುವವರು ಎಂದು ತಿಳಿದು ಬಂದಿದೆ. ಕಳೆದ ಜೂ. 17 ರಂದು ಕ್ಷುಲ್ಲಕ ಕಾರಣಕ್ಕೆ ರೇವಣ ಸಿದ್ದಪ್ಪ ಜೊತೆ ಜಗಳ ಕಾದಿದ್ದಾರೆ. ಈ ಜಗಳ ವಿಕೋಪಕ್ಕೆ ತಿರುಗಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಷ್ಟೇ ಅಲ್ಲದೆ, ಸಿಬ್ಬಂದಿ ಹೊರಗಡೆ ಎಳೆದುಕೊಂಡು ಬಂದು ಮೈ ಮೇಲಿನ ಬಟ್ಟೆ ಹರಿದು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ಸಿಬ್ಬಂದಿ ಏನೇ ತಪ್ಪು ಮಾಡಿದ್ರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿತ್ತು. ಕೆಲಸದಲ್ಲಿ ಇರುವಾಗ ಹಲ್ಲೆ‌ ಮಾಡಿರುವುದು ಸರಿಯಲ್ಲ ಎಂಬ ಸಾಕಷ್ಟು ಚರ್ಚೆಯೂ ನಡೆದಿದೆ. ಈ ಕುರಿತು ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details