ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಕಡದಳ್ಳಿ ಗ್ರಾಮದ ಹೊರವಲಯದಲ್ಲಿರುವ ಬೆಣ್ಣೆಹಳ್ಳದಲ್ಲಿ ಎರಡು ದಿನಗಳಿಂದ ಸಿಲುಕಿ ಪ್ರಾಣಾಪಾಯದಲ್ಲಿದ್ದ ಆಂಧ್ರಪ್ರದೇಶದ ಯುವಕ ಮದನ ಎಂಬಾತನನ್ನು ರಕ್ಷಣೆ ಮಾಡಲಾಗಿದೆ. ನಿರಂತರವಾಗಿ ಸುರಿದ ಮಳೆಯಿಂದ ಬೆಣ್ಣೆಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಬೆಣ್ಣೆ ಹಳ್ಳದಲ್ಲಿ ಸಿಲುಕಿದ ಆಂಧ್ರದ ಯುವಕ; ಪ್ರಾಣ ಕಾಪಾಡಿದ ಅಗ್ನಿಶಾಮಕ ಸಿಬ್ಬಂದಿ - ಬೆಣ್ಣೆ ಹಳ್ಳದಲ್ಲಿ ಸಿಲುಕಿದ ಯುವಕನ ರಕ್ಷಣೆ
ನವಲಗುಂದ ತಾಲೂಕಿನ ಕಡದಳ್ಳಿ ಗ್ರಾಮದ ಹೊರವಲಯದ ಬೆಣ್ಣೆ ಹಳ್ಳದಲ್ಲಿ ಎರಡು ದಿನಗಳಿಂದ ಸಿಲುಕಿದ್ದ ಯುವಕನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದರು.
ಬೆಣ್ಣೆ ಹಳ್ಳದಲ್ಲಿ ಸಿಲುಕಿದ ಯುವಕನ ರಕ್ಷಣೆ
ಶನಿವಾರ ಯುವಕನನ್ನು ಗಮನಿಸಿದ ಗ್ರಾಮಸ್ಥರು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕನನ್ನು ರಕ್ಷಿಸಿದರು. ಸಚಿವ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದರು. ಯುವಕ ಸಾಕಷ್ಟು ಬಳಲಿದ್ದರಿಂದ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:ಕೊಪ್ಪಳ ಮಳೆ ಹಾನಿ ಪ್ರದೇಶಕ್ಕೆ ಜನಪ್ರತಿನಿಧಿಗಳ ಭೇಟಿ, ಪರಿಹಾರದ ಭರವಸೆ