ಕಲಬುರಗಿ: ಮೂವರು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಬಂಧಿಸುವಲ್ಲಿ ನಗರದ ಎಂ.ಬಿ.ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಬ್ಬಿ ಕಾಲೋನಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಕಲಬುರಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಬಂಧನ - kalaburagi latest news
ಕೆಕೆಆರ್ ಮತ್ತು ಡೆಲ್ಲಿ ತಂಡಗಳ ನಡುವಿನ ಆಟಕ್ಕೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಎಂ.ಬಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್ ಬೆಟ್ಟಿಂಗ್ ದಂಧೆಕೋರರ ಬಂಧನ
ರಾಜಕುಮಾರ ಮಲಾರಿ (40), ರಾಜು ಅಗರವಾಲ್ (35), ಆನಂದ ರಾಠೋಡ್ (38) ಬಂಧಿತ ಆರೋಪಿಗಳು. ಇವರಿಂದ 3 ಲಕ್ಷ ರೂ. ನಗದು, ಕಾರು, ಟಿವಿ ಮತ್ತು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕೆಕೆಆರ್ ಮತ್ತು ಡೆಲ್ಲಿ ತಂಡಗಳ ಪಂದ್ಯದ ಬೆಟ್ಟಿಂಗ್‌ನಲ್ಲಿ ತೊಡಗಿದ್ದರು. ಈ ಕುರಿತು ಎಂ.ಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಿಂಚೋಳಿಯ ಹಲವೆಡೆ ಭೂಕಂಪನ: ಜೀವಭಯದಲ್ಲಿ ಗ್ರಾಮ ತೊರೆಯುತ್ತಿರುವ ಜನ