ಕಲಬುರಗಿ:ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ನಡೆದಿದೆ.
ಕಲಬುರಗಿಯಲ್ಲಿ ಭೀಕರ ಅಪಘಾತ: ಬೈಕ್ ಮೇಲೆ ಹೋಗ್ತಿದ್ದ ಮೂವರು ಸ್ಥಳದಲ್ಲೇ ಸಾವು - ಭೀಕರ ರಸ್ತೆ ಅಪಘಾತ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ನಡೆದಿದೆ.
ಭೀಕರ ರಸ್ತೆ ಅಪಘಾತ
ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20) ಮತ್ತು ಮಹಾದೇವಪ್ಪಾ ಸಾಲೆಗಾಂವ್ (30) ಮೃತರು ಎಂದು ತಿಳಿದು ಬಂದಿದೆ. ಇವರು ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದವರು ಎನ್ನಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ವಾಪಸ್ ಒಂದೇ ಬೈಕ್ನಲ್ಲಿ ಮೂವರು ಊರಿಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ.
ಈ ಕುರಿತು ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.