ಕಲಬುರಗಿ:ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿಯಾಗಿದೆ. ತೀವ್ರ ಉಸಿರಾಟದ ತೊಂದರೆ ಎದುರಿಸುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆತರುವುದರೊಳಗಾಗಿ ಸಾವನ್ನಪ್ಪಿದ್ದಾನೆ.
ಮೃತಪಟ್ಟ ವ್ಯಕ್ತಿ ಮೋಮಿನಪುರ ಕಂಟೇನ್ಮೆಂಟ್ ಝೋನ್ಗೆ ಸೇರಿದವನಾಗಿದ್ದಾನೆ. ಈತನಿಗೆ ಯಾರಿಂದ ಸೋಂಕು ಬಂದಿದೆ ಎಂಬ ಟ್ರಾವೆಲ್ ಹಿಸ್ಟರಿ ಇನ್ನೂ ಸಿಕ್ಕಿಲ್ಲ. ಆಸ್ಪತ್ರೆಗೆ ಬರುವುರೊಳಗಾಗಿ ಮೃತಪಟ್ಟ ವ್ಯಕ್ತಿಯ ಥ್ರೋಟ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಿಕೊಡಲಾಗಿತ್ತು. ಇದೀಗ ವೃದ್ಧನಿಗೆ ಕೊರೊನಾ ಸೋಂಕಿರೋದು ದೃಢಪಟ್ಟಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ ಮೃತನ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಕಲಬುರಗಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಜಿಲ್ಲೆಯಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ
ಇಂದು ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೇಸೆಂಟ್ - 848 ರಿಂದ 45 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿದರೆ, ಮೃತರ ಸಂಖ್ಯೆ 07ಕ್ಕೇರಿದೆ.
ಕಲಬುರಗಿಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿ.
ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೇಸೆಂಟ್ - 848 ರಿಂದ 45 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 75ಕ್ಕೆ ಏರಿದರೆ, ಮೃತರ ಸಂಖ್ಯೆ 07ಕ್ಕೇರಿದೆ.