ಕಲಬುರಗಿ:ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿವೆ. ಕಲಬುರಗಿ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾರಣಕ್ಕಾಗಿ ಕೊಠಡಿ ಮೇಲ್ವಿಚಾರಕರನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ. ಹಯಾದ್ ಭಾಗವಾನ್ ಅಮಾನತಾದ ಶಿಕ್ಷಕ.
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಅನುಮತಿ.. ಮೇಲ್ವಿಚಾರಕ ಅಮಾನತು - Teacher suspend in kalaburagi
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಾಲೆಯೊಂದರಲ್ಲಿ ಹಿಜಾಬ್ ಧರಿಸಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಮೇಲ್ವಿಚಾರಕರೊಬ್ಬರನ್ನು ಅಮಾನತು ಮಾಡಲಾಗಿದೆ.

ಮೇಲ್ವಿಚಾರಕ ಅಮಾನತು
ಮಾರ್ಚ್ 28 ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯ ವೇಳೆ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಆಗಮಿಸಿದ್ದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರು. ಇದನ್ನು ವಿರೋಧಿಸಿ ಶ್ರೀರಾಮಸೇನೆ ಅಧ್ಯಕ್ಷ ನಿಂಗನಗೌಡ ಅವರು ಡಿಡಿಪಿಐಗೆ ದೂರು ನೀಡಿದ್ದರು. ದೂರಿನ ಅನ್ವಯ ಡಿಡಿಪಿಐ ಅಶೋಕ್ ಭಜಂತ್ರಿ ಅವರು ಹಯಾದ್ ಭಾಗವಾನ್ ಅವರನ್ನು ಅವಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಓದಿ:ಕೊನೆಗೂ ನಿರ್ಧಾರಕ್ಕೆ ಬದ್ಧರಾದ ಸಿಎಂ ಇಬ್ರಾಹಿಂ: ಕಾಂಗ್ರೆಸ್ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ