ಕಲಬುರಗಿ:371ಜೆ ಕಲಂ ಮುಂಬಡ್ತಿ ನಿಯಮ ಕಾನೂನು ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
371ಜೆ ಸಮಪರ್ಕವಾಗಿ ಜಾರಿಗೊಳಿಸಲು ಆಗ್ರಹಿಸಿ ಪ್ರತಿಭಟನೆ - 371ಜೆ ಕಲಂ ಮುಂಬಡ್ತಿ ನಿಯಮ ಕಾನೂನು ತಿದ್ದುಪಡಿಗೆ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
![371ಜೆ ಸಮಪರ್ಕವಾಗಿ ಜಾರಿಗೊಳಿಸಲು ಆಗ್ರಹಿಸಿ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-5168733-thumbnail-3x2-tttt.jpg)
Hindu chintakara vedike protest against government
ನಗರದ ಎಸ್.ವಿ.ಪಿ. ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಭಾಗದ ಜನರ ಒಳಿತಿಗಾಗಿ ತರಲಾದ 371ಜೆ ಕಲಂ ಸಮಪರ್ಕವಾಗಿ ಜಾರಿಗೊಳಿಸದ ಹಿನ್ನೆಲೆ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.