ಕಲಬುರಗಿ:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂಯಿಂದ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಎಐಎಂಐಎಂ ಸಂಸ್ಥಾಪಕ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಎಐಎಂಐಎಂ ಸ್ಪರ್ಧೆ: ಓವೈಸಿ
ಮುಂದೆ ಕರ್ನಾಟಕದಲ್ಲಿ ಯಾವ ಸಂದರ್ಭದಲ್ಲಿಯೇ ವಿಧಾನಸಭೆ ಚುನಾವಣೆ ನಡೆದರೂ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ಐಎಂಐಎಂ ಸಂಸ್ಥಾಪಕ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಅಸಾದುದ್ದೀನ್ ಓವೈಸಿ
ಕಲಬುರಗಿ ಭೇಟಿ ವೇಳೆ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ ಅಷ್ಟು ಸದೃಢವಾಗಿರಲಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಸ್ಪರ್ಧಿಸಿರಲಿಲ್ಲ. ಮುಂದೆ ಕರ್ನಾಟಕದಲ್ಲಿ ಯಾವ ಸಂದರ್ಭದಲ್ಲಿಯೇ ವಿಧಾನಸಭೆ ಚುನಾವಣೆ ನಡೆದರೂ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ಹೇಳಿದರು.
ವಿಧಾನಸಭೆ ಜೊತೆಗೆ ನಗರ ಸ್ಥಳೀಯ ಸಂಸ್ಥೆ, ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿಯೂ ಸ್ಪರ್ಧೆ ಮಾಡುವುದಾಗಿ ಓವೈಸಿ ಹೇಳಿದರು.