ಕಲಬುರಗಿ: ನಗರದಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಖತರ್ನಾಕ್ ಖದೀಮರನ್ನು ಹೆಡೆಮುರಿ ಕಟ್ಟಿದ್ದಾರೆ. ಐಷಾರಾಮಿ ಜೀವನ ನಡೆಸುವುದಕ್ಕಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯಲ್ಲಿ ಇಬ್ಬರು ಖತರ್ನಾಕ್ ಬೈಕ್ ಕಳ್ಳರ ಬಂಧನ: 8.5 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ - ಐಷಾರಾಮಿ ಜೀವನ ನಡೆಸುವುದಕ್ಕಾಗಿ ಬೈಕ್ ಕಳ್ಳತನ
ಕಲಬುರಗಿ ನಗರದ ಹಲವೆಡೆ ಐಷಾರಾಮಿ ಜೀವನ ನಡೆಸುವುದಕ್ಕಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದು, 16 ವಿವಿಧ ಕಂಪನಿಯ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೈಕ್ ಕಳ್ಳರ ಬಂಧನ
ಮಲ್ಲಿಕಾರ್ಜುನ ಅಲಿಯಾಸ್ ಮಲ್ಲು ಕೋರಿ (21), ಪ್ರಸಾದ್ ಬಿದನೂರು (22) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಸಿದ್ದು ಪೂಜಾರಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ವಿವಿಧೆಡೆ ಕಳ್ಳತನ ಮಾಡಿದ್ದ ಸುಮಾರು 8.5 ಲಕ್ಷ ರೂ. ಮೌಲ್ಯದ 16 ವಿವಿಧ ಕಂಪನಿಯ ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತರು ಐಷಾರಾಮಿ ಜೀವನ ನಡೆಸುವುದಕ್ಕಾಗಿ ಬೈಕ್ ಕಳ್ಳತನ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.