ಕಲಬುರಗಿ:ಕೊರೊನಾ ವೈರಸ್ ಭೀತಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಡಂಗೂರ ಸಾರಿ ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದೆ.
ಕಲಬುರಗಿಯಲ್ಲಿ ಡಂಗೂರ ಸಾರುವ ಮೂಲಕ ನಾಗರಿಕರಲ್ಲಿ ಕೊರೊನಾ ಜಾಗೃತಿ - ಕೊವೀಡ್-19 ಜಾಗೃತಿ ಅಭಿಯಾನ
ದಿನೇ ದಿನೇ ಕಲಬುರಗಿಯಲ್ಲಿ ಕೊರೊನಾ ವೈರಸ್ ಭೀತಿ ಉಲ್ಬಣವಾಗುತ್ತಿರುವ ಹಿನ್ನೆಲೆ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಡಂಗೂರ ಸಾರಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಕೊವಿಡ್-19 ಜಾಗೃತಿ ಅಭಿಯಾನದ ಮೂಲಕ ನಗರದ ಬ್ರಹ್ಮಪುರ, ಗಂಗಾನಗರ, ಎನ್.ಆರ್. ಕಾಲೋನಿ, ಕನಕ ನಗರ ಹೀಗೆ ನಗರದಾದ್ಯಂತ ಪೌರ ಕಾರ್ಮಿಕರು ಹಾಗೂ ಮಹಾನಗರ ಪಾಲಿಕೆ ವತಿಯಿಂದ ತಮಟೆ ಬಾರಿಸುತ್ತ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಸಹ ಪಾಲ್ಗೊಂಡು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದಲ್ಲೂ ಡಂಗೂರ ಸಾರಿ ಕೊರೊನಾ ವೈರಸ್‌ನಿಂದ ಜಾಗೃತವಾಗಿರುವಂತೆ ಮನವಿ ಮಾಡಲಾಗುತ್ತಿದೆ.
ಅಘೋಷಿತ ಬಂದ್:
ಕಲಬುರಗಿ ನಗರದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಜನ ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.