ಕಲಬುರಗಿ:ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೋದಿ ವಿರುದ್ಧ ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡಿದ್ದಾರೆ. ಹಾಗಾಗಿ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆ ಯಾಚಿಸಬೇಕು: ಬಿಜೆಪಿ ಆಗ್ರಹ - ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ
ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೋದಿ ವಿರುದ್ಧ ರಾಹುಲ್ ಗಾಂಧಿ ಸುಳ್ಳು ಆರೋಪ ಹೊರಿಸಿದ್ದಾರೆ. ಹೀಗಾಗಿ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ .
ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆಯಾಚಿಸಬೇಕು: ಬಿಜೆಪಿ ಪ್ರತಿಭಟನೆಗೆ ಕಾರಣವೇನು..?
ನಗರದ ಎಸ್.ವಿ.ಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ಸುಳ್ಳು ಆರೋಪದ ಮೂಲಕ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಬಹುಕೋಟಿ ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸುಳ್ಳು ಆರೋಪ ಮಾಡಿದ ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
TAGGED:
ಮೋದಿ ವಿರುದ್ಧ ಸುಳ್ಳು ಆರೋಪ