ಕಲಬುರಗಿ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಆಳಂದ, ಖಜೂರಿ ಮತ್ತು ಕಿಣ್ಣಿ ಸುಲ್ತಾನ ಗ್ರಾಮದ ಸ್ಟ್ರಾಂಗ್ ರೂಂ ಮತ್ತು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.
ಸ್ಟ್ರಾಂಗ್ ರೂಂ ಸ್ಥಾಪಿಸಿ ಅಗತ್ಯ ಪೊಲೀಸ್ ಭದ್ರತೆ ಒದಗಿಸಬೇಕು. ಇಲ್ಲಿಯೇ ಮತ ಎಣಿಕೆ ನಡೆಯುವುದರಿಂದ ಇದಕ್ಕೂ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಹಾಗೂ ಕಟ್ಟಡದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಹಾಯವಾಣಿ ಸ್ಥಾಪನೆ
ಗ್ರಾಪಂ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಜಿಲ್ಲೆಯ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ದಿನದ 24 ಗಂಟೆ ಕಾರ್ಯನಿರ್ವಹಿಸಲು ಆಯಾ ಅಬಕಾರಿ ಇಲಾಖೆಯ ಕಚೇರಿಗಳಲ್ಲಿ ತಾತ್ಕಾಲಿಕ ನಿಯಂತ್ರಣಾ ಕೊಠಡಿ ಸ್ಥಾಪಿಸಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕಲಬುರಗಿ ಅಬಕಾರಿ ಉಪ ಆಯುಕ್ತರು ತಿಳಿಸಿದರು.
ಕಲಬುರಗಿ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಚೇರಿ ದೂರವಾಣಿ ಸಂಖ್ಯೆ-08472-278682, ಕಲಬುರಗಿ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರು ದೂರವಾಣಿ ಸಂಖ್ಯೆ 08472-278684 ಮೊಬೈಲ್ ಸಂಖ್ಯೆ: 9916244473, ಚಿತ್ತಾಪುರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕರು ದೂರವಾಣಿ ಸಂ. 08474-236811, ಮೊಬೈಲ್ ಸಂಖ್ಯೆ 9880988464.
ಆಳಂದ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 08477-202200, ಮೊಬೈಲ್ ಸಂ.9035636664, ಜೇವರ್ಗಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂರವಾಣಿ ಸಂ. 08442-235215, ಮೊಬೈಲ್ ಸಂಖ್ಯೆ 8880621110, ಚಿತ್ತಾಪುರ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂರವಾಣಿ ಸಂ. 08474-236770, ಮೊಬೈಲ್ ಸಂ. 9880988464.
ಸೇಡಂ ವಲಯದ ಅಬಕಾರಿ ನಿರೀಕ್ಷಕ ಕಚೇರಿ ದೂರವಾಣಿ ಸಂ. 08441-277141, ಮೊಬೈಲ್ ಸಂಖ್ಯೆ 9902568412, ಚಿಂಚೋಳಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿ ದೂರವಾಣಿ ಸಂ. 08475-273490, ಮೊಬೈಲ್ ಸಂಖ್ಯೆ 9449980028.