ಕಲಬುರಗಿ:ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ನೆರೆ ಪ್ರವಾಹ ಅಧ್ಯಯನ ತಂಡ ಭೀಮಾ ನದಿ ಪ್ರವಾಹದಿಂದ ಹಾನಿಯಾದ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿತು.
ಕೇಂದ್ರ ಗೃಹ ಸಚಿವಾಲಯದ ರಮೇಶ್ ಕುಮಾರ್ ಘಂಟಾ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ವಿಭಾಗದ ನಿರ್ದೇಶಕ ಭತೇಂದ್ರ ಕುಮಾರ್ ಸಿಂಗ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಅವರ ತಂಡ ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿತು.
ಮೊದಲು ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಪ್ರವಾಹ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಕೇಂದ್ರ ತಂಡಕ್ಕೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮಾಹಿತಿ ನೀಡಿದರು. ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ನೆರೆಪೀಡಿತ ಪ್ರದೇಶಗಳ ಕಡೆ ತಂಡ ಸಾಗಿತು.