ಕರ್ನಾಟಕ

karnataka

ETV Bharat / city

ಚಿಂಚೋಳಿ ಉಪಚುನಾವಣೆ... ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗದಿಂದ ಡೆಡ್​ಲೈನ್​ - undefined

ಚಿಂಚೋಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ಬಹಿರಂಗ ಪ್ರಚಾರಕ್ಕೆ ಮೇ 17ರಂದು ತೆರೆ ಬೀಳಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಮೇ 17ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ

By

Published : May 14, 2019, 10:45 AM IST

ಕಲಬುರಗಿ: ಮೇ 19ರಂದು ಮತದಾನ ನಡೆಯಲಿರುವ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ, ಮೇ 17 ರಂದು ಸಂಜೆ 6 ಗಂಟೆಗೆ ಮುಕ್ತಾಯಗೊಳಿಸುವಂತೆ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಸದ್ಯ ಚಿಂಚೋಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಈ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮೇ 17 ರಂದು ತೆರೆ ಬೀಳಲಿದೆ. ಯಾವುದೇ ರಾಜಕೀಯ ಪಕ್ಷದ ಮುಖಂಡರು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ಚುನಾವಣಾ ಏಜೆಂಟ್​ ಮತ್ತು ಬೆಂಬಲಿಗರು ಬಹಿರಂಗ ಪ್ರಚಾರ ನಡೆಸುವುದನ್ನು ನಿರ್ಬಂಧಿಸುವಂತೆ ಕಲಬುರಗಿ ಜಿಲ್ಲಾಧಿಕಾರಿ ಆರ್. ವೆಂಕಟೇಶ್​ ಕುಮಾರ ಅವರು ಆದೇಶ ಹೊರಡಿಸಿದ್ದಾರೆ.

ಮೇ 17ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ, ಕಾಂಗ್ರೆಸ್​ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರು ಆಗಮಿಸಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಇಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡಾ ಚಿಂಚೋಳಿಯಲ್ಲಿ ಮೈತ್ರಿ ಅಭ್ಯರ್ಥಿ ಸುಭಾಷ್ ರಾಥೋಡ್ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಇನ್ನು ಮೇ 17ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳಿಸುವಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನ ಹಾಗೂ ಸಿಆರ್​ಪಿಸಿ ಸೆಕ್ಷನ್ 144ರನ್ವಯ ಆದೇಶ ಹೊರಡಿಸಲಾಗಿದೆ.

ಈ ಆದೇಶದನ್ವಯ ಮನೆ-ಮನೆಗೆ ತೆರಳಿ ಮತಯಾಚಿಸುವುದು ಮತ್ತು ಕರಪತ್ರಗಳನ್ನು ವಿತರಿಸಲು ನಿರ್ಬಂಧ ಇರುವುದಿಲ್ಲ. ಆದರೆ, ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಹಾಗೂ ಈ ಅವಧಿಯಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಹೊರಗಿನಿಂದ ಬಂದಂತಹ ಹಾಗೂ ಈ ಕ್ಷೇತ್ರದ ಮತದಾರರಲ್ಲದ ರಾಜಕೀಯ ಕಾರ್ಯಕರ್ತರು, ಮುಖಂಡರು ಚಿಂಚೋಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸವಿರದಂತೆ ಕಟ್ಟೆಚ್ಚರ ವಹಿಸಬೇಕು. ಈ ಆದೇಶವು ಮೇ 17ರ ಸಂಜೆ 6 ಗಂಟೆಯಿಂದ ಮೇ 20ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

For All Latest Updates

TAGGED:

ABOUT THE AUTHOR

...view details