ಕರ್ನಾಟಕ

karnataka

ETV Bharat / city

ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ : ಸಿಎಂ ಬೊಮ್ಮಾಯಿ - ಕಲಬುರಗಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶವನ್ನು ಪಾಲಿಸುವುದಾಗಿ ಹೇಳಿದ್ದಾರೆ..

cm-basavaraja-bommai-on-loud-speakers-on-masjids
ಮಸೀದಿಗಳ ಮೇಲಿನ ದ್ವನಿವರ್ಧಕ ವಿಚಾರದಲ್ಲಿ ಕೋರ್ಟ್ ಆದೇಶ ಪಾಲಿಸುತ್ತೇವೆ: ಸಿಎಂ ಬೊಮ್ಮಾಯಿ

By

Published : Apr 22, 2022, 11:00 AM IST

Updated : Apr 22, 2022, 12:41 PM IST

ಕಲಬುರಗಿ :ಮೇ 9ರಿಂದ ಶ್ರೀರಾಮ‌ ಸೇನೆ 'ಆಜಾನ್ ಸೇ ಆಜಾದಿ' ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದೆ. ಯಾವ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸರ್ಕ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸೋದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೋಣ ಎಂದು ಸಿಎಂ ಹೇಳಿದ್ದಾರೆ.

ಧ್ವನಿವರ್ಧಕಗಳ ಬಳಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿರುವುದು..

ಇನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡೋದಕ್ಕೆ ಭಿನ್ನಾಭಿಪ್ರಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಹೆಸರು ಇಡುವ ವಿಚಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು. ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಕುರಿತು ಅಸಮಾಧಾನ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೆ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಗೃಹ ಖಾತೆ ಕೊಟ್ಟರೆ ನಿಭಾಯಿಸುವೆ : ಕೃಷಿ ಸಚಿವ ಬಿ.ಸಿ.ಪಾಟೀಲ್

Last Updated : Apr 22, 2022, 12:41 PM IST

ABOUT THE AUTHOR

...view details